AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Janaki Passes Away: ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

S Janaki Passes Away: ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಭಾವನಾ ಹೆಗಡೆ
|

Updated on: Jul 12, 2026 | 12:50 PM

Share

ಹಿರಿಯ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ (88) ನಿಧನದಿಂದ ಕನ್ನಡ ಮತ್ತು ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಪಾರ್ಥಿವ ಶರೀರವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ಜಾನಕಿಯವರ ನಿಧನದ ಸುದ್ದಿ ತಿಳಿದ ಕೂಡಲೇ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಅಭಿಮಾನಿಗಳು, ಕಲಾವಿದರು, ರಾಜಕಾರಣಿಗಳು ಮತ್ತು ಗಣ್ಯರು ಅವರ ಅಂತಿಮ ದರ್ಶನ ಪಡೆಯಲು ಮೈಸೂರಿನತ್ತ ಧಾವಿಸಿದರು. ಈ ಸಂದರ್ಭದಲ್ಲಿ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರು ಗಾನಕೋಗಿಲೆಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಮೈಸೂರು, ಜುಲೈ 12: ಹಿರಿಯ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ (88) ನಿಧನದಿಂದ ಕನ್ನಡ ಮತ್ತು ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಪಾರ್ಥಿವ ಶರೀರವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ಜಾನಕಿಯವರ ನಿಧನದ ಸುದ್ದಿ ತಿಳಿದ ಕೂಡಲೇ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಅಭಿಮಾನಿಗಳು, ಕಲಾವಿದರು, ರಾಜಕಾರಣಿಗಳು ಮತ್ತು ಗಣ್ಯರು ಅವರ ಅಂತಿಮ ದರ್ಶನ ಪಡೆಯಲು ಮೈಸೂರಿನತ್ತ ಧಾವಿಸಿದರು. ಈ ಸಂದರ್ಭದಲ್ಲಿ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರು ಗಾನಕೋಗಿಲೆಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಬಾಲ್ಯದಲ್ಲಿ ರೇಡಿಯೊದಲ್ಲಿ ಎಸ್. ಜಾನಕಿ ಅವರ ಹಾಡುಗಳನ್ನು ಕೇಳಿ ಬೆಳೆದ ವಿಜಯ್ ಪ್ರಕಾಶ್, ಆ ಸಮಯದಲ್ಲಿ ಜಾನಕಮ್ಮ ಯಾರು ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ನಂತರ ಸಂಗೀತ ಲೋಕಕ್ಕೆ ಬಂದಾಗ ಅವರ ಗಾಯನದ ಸೂಕ್ಷ್ಮತೆ ಮತ್ತು ತಾಂತ್ರಿಕತೆಯನ್ನು ಅರ್ಥಮಾಡಿಕೊಂಡೆ ಎಂದು ತಿಳಿಸಿದ್ದಾರೆ.

ಜಾನಕಮ್ಮನವರು 17 ಭಾಷೆಗಳಲ್ಲಿ ಸುಮಾರು 48,000 ಹಾಡುಗಳನ್ನು ಹಾಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿದ ವಿಜಯ್ ಪ್ರಕಾಶ್, ಇದು ಅಸಾಧ್ಯವಾದ ಸಾಧನೆ ಎಂದು ಬಣ್ಣಿಸಿದ್ದಾರೆ. ಒಬ್ಬ ವ್ಯಕ್ತಿ 100 ವರ್ಷ ಬದುಕಿದರೂ 36,000 ದಿನ ಮಾತ್ರ ಬದುಕುತ್ತಾರೆ. ಇಷ್ಟು ಹಾಡುಗಳನ್ನು ಹಾಡಲು ದೈಹಿಕ ಸಾಮರ್ಥ್ಯ, ಆಸಕ್ತಿ ಮತ್ತು ಶಕ್ತಿ ಬೇಕು. ಇದೆಲ್ಲಕ್ಕೂ ಮಿಗಿಲಾಗಿ ಭಗವಂತನ ಕರುಣೆ ಇರಬೇಕು. ಈ ಸಾಧನೆ ಒಂದು ಚಮತ್ಕಾರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us