ಪೊಲೀಸ್ ಠಾಣೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ!

Updated on: Nov 22, 2025 | 10:50 PM

ಚಿರತೆಯೊಂದು ಪೊಲೀಸ್ ಠಾಣೆಗೆ ನುಗ್ಗಿ ನಾಯಿಯನ್ನು ಕದ್ದೊಯ್ದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉತ್ತರಾಖಂಡದ ನೈನಿತಾಲ್‌ನ ಬೇತಲ್‌ಘಾಟ್ ಪೊಲೀಸ್ ಠಾಣೆ ಆವರಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಿರತೆ ದಾಳಿಯ ದೃಶ್ಯಗಳು ಪೊಲೀಸ್ ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ವೈರಲ್ ಆಗಿದೆ. ಉತ್ತರಾಖಂಡದಲ್ಲಿ ನಡೆದ ಈ ಆಘಾತಕಾರಿ ಘಟನೆ ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ. ಈ ದೃಶ್ಯಗಳು ಈಗ ವೈರಲ್ ಆಗಿವೆ. ನವೆಂಬರ್ 17 ರಂದು ದಾಖಲಾಗಿರುವ ಸಿಸಿಟಿವಿ ಕ್ಲಿಪ್‌ನಲ್ಲಿ ಚಿರತೆಯನ್ನು ನೋಡಿ ನಾಯಿಯೊಂದು ಹೊರಗೆ ಓಡಿಹೋಗಿ ಅದರ ಮೇಲೆ ಕೂಗುತ್ತಿರುವುದನ್ನು ತೋರಿಸಲಾಗಿದೆ.

ನೈನಿತಾಲ್, ನವೆಂಬರ್ 22: ಚಿರತೆಯೊಂದು ಪೊಲೀಸ್ ಠಾಣೆಗೆ ನುಗ್ಗಿ ನಾಯಿಯನ್ನು ಕದ್ದೊಯ್ದಿದೆ. ಈ ಘಟನೆಯ ವಿಡಿಯೋ (Video Viral) ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಉತ್ತರಾಖಂಡದ ನೈನಿತಾಲ್‌ನಲ್ಲಿರುವ ಬೇತಲ್‌ಘಾಟ್ ಪೊಲೀಸ್ ಠಾಣೆ ಆವರಣದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆಯ ದಾಳಿಯ ದೃಶ್ಯ ದಾಖಲಾಗಿದೆ. ಉತ್ತರಾಖಂಡದಲ್ಲಿ ನಡೆದ ಈ ಆಘಾತಕಾರಿ ಘಟನೆ ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More