ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ..!

| Updated By: ರಮೇಶ್ ಬಿ. ಜವಳಗೇರಾ

Updated on: Jan 14, 2025 | 8:24 PM

ಗ್ರಾಮಕ್ಕೆ ಚಿರತೆ ನುಗ್ಗಿ ಜಾನುವಾರಗಳ ಮೇಲೆ ದಾಳಿ ಮಾಡಿದ್ದನ್ನು ಕೇಳಿದ್ದೇವೆ. ಹಾಗೇ ಸಾಮಾನ್ಯ ಜನರ ಮನೆಗಳಿಗೆ ನುಗ್ಗಿರುವ ಸುದ್ದಿ ಕೇಳಿದ್ದೇವೆ. ಆದ್ರೆ, ಇದೀಗ ಬಿಜೆಪಿ ಎಂಪಿ ನಿವಾಸಕ್ಕೆ ಚಿರತೆ ನುಗ್ಗಿದೆ. ಹೌದು... ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ಮನೆಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ಇನ್ನು ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಕಾಗೇರಿಯವರ ಮನೆಯ ಸಾಕು ನಾಯಿ ಯಶಸ್ವಿಯಾಗಿದೆ.

ಕಾರವಾರ (ಜನವರಿ.14): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿರುವ ಘಟನೆ ನಡೆದಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಈ ಘಟನೆ ನಡೆದಿದೆ. ನಿನ್ನೆ (ಜನವರಿ 13) ತಡರಾತ್ರಿ ವೇಳೆ ಆಹಾರ ಅರಸಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿರುವ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ಶ್ವಾನವನ್ನು ಚಿರತೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಕಾಗೇರಿಯವರ ಮನೆಯ ಸಾಕು ನಾಯಿ ಯಶಸ್ವಿಯಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.