ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

| Updated By: ಆಯೇಷಾ ಬಾನು

Updated on: Sep 25, 2024 | 10:45 AM

ರಸ್ತೆ ದಾಟುತ್ತಾ, ಅಲ್ಲಲ್ಲಿ ಜನರ ಕಣ್ಣಿಗೆ ಕಾಣಿಸುತ್ತ ಭಯ ಹುಟ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಜನರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಈ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲು ಸಿದ್ದತೆ ನಡೆಯುತ್ತಿದೆ.

ಬೆಂಗಳೂರು, ಸೆ.25: ಬೆಂಗಳೂರಿಗರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಚಿರತೆ ಓಡಾಡಿಕೊಂಡಿತ್ತು. ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುವ ಕೈಗಾರಿಕಾ ಪ್ರದೇಶವಾದ ಇಂತಹ ಕಡೆ ಚಿರತೆ ಓಡಾಟಕ್ಕೆ ಜನ ಬೆಚ್ಚಿಬಿದ್ದಿದ್ದರು. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಪ್ ಮಾಡಿ ಮೂರು ಬೋನ್ ಗಳನ್ನ ಇಟ್ಟು ಚಿರತೆ ಸೆರೆ ಹಿಡಿದಿದ್ದಾರೆ. ಈ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲು ಸಿದ್ದತೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us on