ದಾವಣಗೆರೆ: ಜನರ ನೆಮ್ಮದಿ ಹಾಳು ಮಾಡಿದ್ದ ‌ಚಿರತೆ ಕೊನೆಗೂ ಸೆರೆ

ದಾವಣಗೆರೆ: ಜನರ ನೆಮ್ಮದಿ ಹಾಳು ಮಾಡಿದ್ದ ‌ಚಿರತೆ ಕೊನೆಗೂ ಸೆರೆ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on:Sep 08, 2023 | 6:47 AM

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಗ್ರಾಮದ ಸುತ್ತಮುತ್ತಲಿನಲ್ಲಿ ಜನರ ನೆಮ್ಮದಿ ಹಾಳು ಮಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವಾರು ದಿನಗಳಿಂದ ರೈತರ ಜಮೀನಿನಲ್ಲಿ ಚಿರತೆ ಸುತ್ತಾಡುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅದರಂತೆ, ವಾರದಿಂದ ಬೋನು ಇಟ್ಟು ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು.

ದಾವಣಗೆರೆ, ಸೆ.8: ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಗ್ರಾಮದ ಸುತ್ತಮುತ್ತಲಿನಲ್ಲಿ ಜನರ ನೆಮ್ಮದಿ ಹಾಳು ಮಾಡಿದ್ದ ಚಿರತೆ (Leopard) ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವಾರು ದಿನಗಳಿಂದ ರೈತರ ಜಮೀನಿನಲ್ಲಿ ಚಿರತೆ ಸುತ್ತಾಡುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅದರಂತೆ, ವಾರದಿಂದ ಬೋನು ಇಟ್ಟು ಅದರಲ್ಲಿ ಶ್ವಾನವನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಸದ್ಯ ಆಹಾರ ಅರಸುತ್ತಾ ಬಂದ ಚಿರತೆ ಶ್ವಾನ ತಿನ್ನಲು ಬೋನಿಗೆ ನುಗ್ಗಿ ಸೆರೆಯಾಗಿದೆ. ಇದರಿಂದಾಗಿ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Sep 08, 2023 06:46 AM