ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Edited By:

Updated on: Jan 26, 2026 | 3:13 PM

ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.