Video: ಆಹಾರ ಅರಸಿ ಜಾನುವಾರುಗಳಿದ್ದ ಕೊಟ್ಟಿಗೆ ಸೇರಿದ ಚಿರತೆ: 2 ಹಸು ರಕ್ಷಣೆ ಮಾಡಿದ ಅರಣ್ಯ ಅಧಿಕಾರಿಗಳು
ಮನೆಯ ಜಾನುವಾರು ಕೊಟ್ಟಿಗೆಗೆ ಚಿರತೆ ಸೇರಿಕೊಂಡಿರುವಂತಹ ಘಟನೆ ಹಾಸನ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಮಹೇಶ್ ಎಂಬುವವರ ಮನೆಯಲ್ಲಿ ಕಂಡುಬಂದಿದೆ. ತಮ್ಮ ಜಮೀನಿನಲ್ಲಿ ಮನೆ ನಿರ್ಮಿಸಿ ಕುಟುಂಬ ವಾಸವಾಗಿದ್ದು, ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಚಿರತೆ ಸಿಲುಕಿದೆ.
ಹಾಸನ: ಮನೆಯ ಜಾನುವಾರು ಕೊಟ್ಟಿಗೆಗೆ ಚಿರತೆ (Leopard) ಸೇರಿಕೊಂಡಿರುವಂತಹ ಘಟನೆ ಹಾಸನ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಮಹೇಶ್ ಎಂಬುವವರ ಮನೆಯಲ್ಲಿ ಕಂಡುಬಂದಿದೆ. ತಮ್ಮ ಜಮೀನಿನಲ್ಲಿ ಮನೆ ನಿರ್ಮಿಸಿ ಕುಟುಂಬ ವಾಸವಾಗಿದ್ದು, ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಚಿರತೆ ಸಿಲುಕಿದೆ. ಜಾನುವಾರು ಇದ್ದ ಕಾರಣ ಆಹಾರ ಅರಸಿ ನುಗ್ಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದೆ. ಸದ್ಯ ಕೊಟ್ಟಿಗೆಯಲ್ಲಿ ಸಿಲುಕಿದ್ದ 2 ಹಸು ರಕ್ಷಣೆ ಮಾಡಿದ್ದು, ಒಂದು ಹಸು, ಒಂದು ಕರು ಸಿಕ್ಕಿಕೊಂಡಿದೆ. ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಬೋನ್ ಅಳವಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 14, 2023 04:54 PM
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
