AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಗಣಪತಿ ಶರ್ಮಾ
|

Updated on: Feb 10, 2026 | 12:43 PM

Share

ಕರ್ನಾಟಕ ರಾಜಧಾನಿ ಬೆಂಗಳೂರಿಗೂ ಇದೀಗ ಚಿರತೆ ಕಾಟ ಶುರುವಾಗಿದೆ. ನಗರದ ಅಂಜನಾಪುರ ಐದನೇ ಬ್ಲಾಕ್​​ನಲ್ಲಿ ಮನೆಯೊಂದರ ಗೇಟ್ ಒಳಗೆ ಚಿರತೆ ಬಂದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಟ ಇರುವ ಬಗ್ಗೆ ವರದಿಯಾಗುತ್ತಿದ್ದು, ಜನ ರಾತ್ರಿ ವೇಳೆ ಮನೆಯಿಂದ ಹೊರಹೋಗಲೂ ಹೆದರುವಂತಾಗಿದೆ.

ಬೆಂಗಳೂರು, ಫೆಬ್ರವರಿ 10: ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಬಂದಿರುವ ಸಿಸಿಟಿವಿ ವಿಡಿಯೋ ಕೆಲವು ದಿನಗಳ ಹಿಂದೆ ಜನರನ್ನು ಭಯಭೀತರನ್ನಾಗಿಸಿತ್ತು. ಇದೀಗ ಮತ್ತೆ ಅಂಜನಾಪುರದ 5ಜಿ ಬ್ಲಾಕ್​​ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಸಂದೀಪ್ ಎಂಬುವರ ಮನೆ ಗೇಟ್​ ಬಳಿ ಚಿರತೆ ಕಾಣಿಸಿಕೊಂಡಿದೆ. ತಡರಾತ್ರಿ ಮನೆ ಗೇಟ್ ಒಳಗೇ ಬಂದ ಚಿರತೆ ನಂತರ ಹೊರ ಹೋಗುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More