AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಸೆರೆ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ

ಮಂಡ್ಯದಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಸೆರೆ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ

ದಿಲೀಪ್​, ಚೌಡಹಳ್ಳಿ
| Edited By: |

Updated on: Mar 20, 2026 | 11:59 AM

Share

ಮಂಡ್ಯ ಜಿಲ್ಲೆಯ ಭೂತನ ಹೊಸೂರು ಗ್ರಾಮದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಬ್ಬಿನ ಗದ್ದೆಯಲ್ಲಿ ಮೂರು ಮರಿಗಳು ಪತ್ತೆಯಾಗಿದ್ದ ನಂತರ ತಾಯಿ ಚಿರತೆ ಹಾವಳಿ ಹೆಚ್ಚಾಗಿತ್ತು. ಇದೀಗ ಚಿರತೆ ಸೆರೆಯಿಂದ ಗ್ರಾಮಸ್ಥರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಮಂಡ್ಯ, ಮಾರ್ಚ್ 20: ಮಂಡ್ಯ ಜಿಲ್ಲೆಯಾದ್ಯಂತ ಚಿರತೆ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಮಂಡ್ಯ ಹೊರವಲಯದ ಭೂತನ ಹೊಸೂರು ಗ್ರಾಮದಲ್ಲಿ ಜನರಲ್ಲಿ ಆತಂಕ ಮನೆ ಮಾಡಿತ್ತು. ಕಬ್ಬಿನ ಗದ್ದೆಯಲ್ಲಿ ಇತ್ತೀಚೆಗೆ ಮೂರು ಚಿರತೆ ಮರಿಗಳು ಕಾಣಿಸಿದ ನಂತರ, ತಾಯಿ ಚಿರತೆಯ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರಿಗೆ ಜಮೀನುಗಳಿಗೆ ಹೋಗಲು ಭಯ ಕಾಡುತ್ತಿತ್ತು, ಅಲ್ಲದೆ ಸಾಕುಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು.

ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಬೋನು ಇರಿಸಿದ್ದರು. ಈಗ ಮರಿಗಳನ್ನು ಹುಡುಕಿಕೊಂಡು ಬಂದ ತಾಯಿ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಿಂದ ಭೂತನ ಹೊಸೂರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಬೋನಿಗೆ ಬಿದ್ದ ಚಿರತೆ ನೋಡಲು ನೂರಾರು ಸಂಖ್ಯೆಯಲ್ಲಿ ಜನ ಆಗಿಸಿದ್ದು ಕಂಡುಬಂತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More