AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಗಡಿ ತಾಲೂಕಿನಲ್ಲಿ ಮಿತಿಮೀರಿದ ಚಿರತೆ ಹಾವಳಿ! ಸಿಸಿಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ಮಾಗಡಿ ತಾಲೂಕಿನಲ್ಲಿ ಮಿತಿಮೀರಿದ ಚಿರತೆ ಹಾವಳಿ! ಸಿಸಿಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ಪ್ರಶಾಂತ್​ ಬಿ.
| Edited By: |

Updated on: Oct 16, 2026 | 1:47 PM

Share

ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಹುಷಾರಾಣಿ ಅವರ ತೋಟದ ಮನೆಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಅದರ ಓಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಾನುವಾರು ಮತ್ತು ಸಾಕುಪ್ರಾಣಿಗಳ ಮೇಲಿನ ದಾಳಿಯ ಭೀತಿಯಿಂದಾಗಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅನಾಹುತ ಸಂಭವಿಸುವ ಮುನ್ನ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ರಾಮನಗರ, ಅಕ್ಟೋಬರ್ 16: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇತ್ತೀಚೆಗೆ ಹುಷಾರಾಣಿ ಎಂಬುವವರ ತೋಟದ ಮನೆಯ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಅದರ ಓಡಾಟದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಚಿರತೆಯು ಗೇಟ್ ಒಳಗಡೆ ಓಡಾಡುತ್ತಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ.

ಕೇವಲ ಕೆಲ ದಿನಗಳ ಹಿಂದೆ ಕಲ್ದೇವನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತನ ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಚಕ್ರಬಾವಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಜನರನ್ನು ಮತ್ತಷ್ಟು ಭಯಭೀತರನ್ನಾಗಿ ಮಾಡಿದೆ. ಚಿರತೆಯು ಜಾನುವಾರುಗಳು ಮತ್ತು ಸಾಕುಪ್ರಾಣಿಗಳ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಗ್ರಾಮಸ್ಥರು ರಾತ್ರಿ ವೇಳೆ ಹೊರಗೆ ಬರಲು ಹೆದರುತ್ತಿದ್ದಾರೆ.

ಮತ್ತೆ ಮತ್ತೆ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿರುವುದು ಮತ್ತು ಬೇಟೆಗಾಗಿ ಅಲೆದಾಡುತ್ತಿರುವುದು ಸ್ಪಷ್ಟವಾಗಿದೆ. ಅನಾಹುತಗಳು ಸಂಭವಿಸುವ ಮುನ್ನವೇ ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ತೀವ್ರವಾಗಿ ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More