ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಆರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದೆ. ಅರಣ್ಯ ಇಲಾಖೆಯು ಚಿರತೆಯನ್ನು ಸೆರೆಹಿಡಿಯಲು ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಇದುವರೆಗೂ ಯಶಸ್ವಿಯಾಗಿಲ್ಲ. ಇದೀಗ ಮತ್ತೆ ಚಿರತೆ ರಸ್ತೆ ದಾಟುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಸದ್ಯ ಅರಣ್ಯ ಇಲಾಖೆ ಕ್ಯಾಂಪಸ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.
ಮೈಸೂರು, ಜನವರಿ 06: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ (Leopard) ಕಾಣಿಸಿಕೊಂಡಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕಳೆದ ಆರು ದಿನಗಳಿಂದ ಅರಣ್ಯ ಇಲಾಖೆ ಚಿರತೆ ಸೆರೆ ಕಾರ್ಯಾಚರಣೆ ನಡೆಸುತ್ತಿದೆ. ಆರು ದಿನಗಳಿಂದ ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿದೆ. ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ. ಸತತ ಕಾರ್ಯಾಚರಣೆ ನಡೆಸುತ್ತಿದ್ದರು ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿರುವ ಬೋನ್ಗೆ ಮಾತ್ರ ಚಿರತೆ ಬೀಳುತ್ತಿಲ್ಲ. ಹಾಗಾಗಿ ಅರಣ್ಯ ಇಲಾಖೆಗೆ ಮತ್ತಷ್ಟು ತಲೆನೋವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ

ಕೀಟನಾಶಕ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
