AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಜಗದೀಶ ಬಿ.
| Edited By: |

Updated on: Oct 22, 2026 | 1:20 PM

Share

ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ತಿಮ್ಮಸಂದ್ರ ಗ್ರಾಮದಲ್ಲಿ ಆತಂಕ ಮನೆಮಾಡಿದೆ. ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿ ಕೋಳಿ ಹಿಡಿದ ಚಿರತೆ ನಂತರ ತೆಂಗಿನ ಮರ ಏರಿ ಕುಳಿತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣೆದುರೇ ತಪ್ಪಿಸಿಕೊಂಡ ಚಿರತೆ ಸೆರೆಹಿಡಿಯಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇಲಾಖೆ ಬೋನು ಇರಿಸಿದೆ.

ತುಮಕೂರು, ಅಕ್ಟೋಬರ್​​ 22: ಇಲ್ಲಿನ ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ತಿಮ್ಮಸಂದ್ರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ಚಿರತೆ ಕೋಳಿ ಹಿಡಿದಿದ್ದು, ಬಳಿಕ ತೆಂಗಿನ ಮರವೇರಿ ಕುಳಿತಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ‌ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಚಿರತೆ ತಪ್ಪಿಸಿಕೊಂಡಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿದ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನ್ ಇರಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More