ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ತಿಮ್ಮಸಂದ್ರ ಗ್ರಾಮದಲ್ಲಿ ಆತಂಕ ಮನೆಮಾಡಿದೆ. ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿ ಕೋಳಿ ಹಿಡಿದ ಚಿರತೆ ನಂತರ ತೆಂಗಿನ ಮರ ಏರಿ ಕುಳಿತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣೆದುರೇ ತಪ್ಪಿಸಿಕೊಂಡ ಚಿರತೆ ಸೆರೆಹಿಡಿಯಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇಲಾಖೆ ಬೋನು ಇರಿಸಿದೆ.
ತುಮಕೂರು, ಅಕ್ಟೋಬರ್ 22: ಇಲ್ಲಿನ ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ತಿಮ್ಮಸಂದ್ರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ಚಿರತೆ ಕೋಳಿ ಹಿಡಿದಿದ್ದು, ಬಳಿಕ ತೆಂಗಿನ ಮರವೇರಿ ಕುಳಿತಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಚಿರತೆ ತಪ್ಪಿಸಿಕೊಂಡಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿದ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನ್ ಇರಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
