Leopard Spotted In Bengaluru: ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಒಂದು ತಿಂಗಳ ಅವಧಿಯಲ್ಲೇ ಇದು ಎರಡನೇ ಬಾರಿಗೆ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಬೆಂಗಳೂರು, ಆಗಸ್ಟ್ 11: ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಒಂದು ತಿಂಗಳ ಅವಧಿಯಲ್ಲೇ ಇದು ಎರಡನೇ ಬಾರಿಗೆ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಚಿರತೆ ಪ್ರತ್ಯಕ್ಷವಾದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ತಕ್ಷಣ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಾಪಸಾಗಿದ್ದರು. ಇಂದು ಕಗ್ಗಲೀಪುರ ಅರಣ್ಯ ಅಧಿಕಾರಿಗಳು ಚಿರತೆ ಸೆರೆಹಿಡಿಯುವ ಕಾರ್ಯಾಚರಣೆಯನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೂ, ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರ ಮನಸ್ಸಿನಲ್ಲಿ ಭಯ ಮೂಡಿಸಿದೆ. ಚಿಕ್ಕ ಮಕ್ಕಳು ಮತ್ತು ವೃದ್ಧರ ಬಗ್ಗೆ ವಿಶೇಷವಾಗಿ ಕಳವಳ ವ್ಯಕ್ತವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
