ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್

Edited By:

Updated on: Feb 03, 2026 | 11:22 AM

ಬೆಂಗಳೂರಿನ ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜನರು ರಾತ್ರಿ ವೇಳೆ ಮನೆಯಿಂದ ಹೊರಗೆ ಹೋಗದೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಚಿರತೆ ಪತ್ತೆಗಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಸಿಸಿಟಿವಿ ವಿಡಿಯೋ ಇಲ್ಲಿದೆ.

ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More