ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಮೇಲೆಯೇ ಚಿರತೆ ಪ್ರತ್ಯಕ್ಷ! ಗ್ರಾಮಸ್ಥರ ಆತಂಕ
ಬೆಂಗಳೂರು ದಕ್ಷಿಣ ಹಾಗೂ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಸ್ಥಳೀಯರು ಚಿರತೆ ಓಡಾಟದ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಗ್ರಾಮದೊಳಗೆ ಚಿರತೆ ಪ್ರವೇಶಿಸುವ ಮುನ್ನ ಬೋನು ಅಳವಡಿಸಿ ಅದನ್ನು ತಕ್ಷಣವೇ ಸೆರೆಹಿಡಿಯಬೇಕೆಂದು ಹುಣಸನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ರಾಮನಗರ, ಅಕ್ಟೋಬರ್ 18: ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಬೆಂಗಳೂರು ದಕ್ಷಿಣ ಭಾಗದಲ್ಲಿ ಚಿರತೆಗಳ ಹಾವಳಿ ತೀವ್ರಗೊಂಡಿದ್ದು, ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲೇ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಸ್ತೆಯ ಮೇಲೆಯೇ ಮುಕ್ತವಾಗಿ ಓಡಾಡುತ್ತಿದ್ದ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಸವಾರರು ಹಾಗೂ ಗ್ರಾಮಸ್ಥರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಗ್ರಾಮದೊಳಗೆ ಚಿರತೆ ಪ್ರವೇಶಿಸಿ ಸಾರ್ವಜನಿಕರು ಹಾಗೂ ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುವ ಮುನ್ನ, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯಬೇಕೆಂದು ಹುಣಸನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 18, 2026 08:18 AM
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್ಗೆ ಸೀಮಿತ ಅನುಮತಿ ನೀಡಿದ ಕೋರ್ಟ್

