ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಮೇಲೆಯೇ ಚಿರತೆ ಪ್ರತ್ಯಕ್ಷ! ಗ್ರಾಮಸ್ಥರ ಆತಂಕ

Edited By:

Updated on: Oct 18, 2026 | 8:57 AM

ಬೆಂಗಳೂರು ದಕ್ಷಿಣ ಹಾಗೂ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಸ್ಥಳೀಯರು ಚಿರತೆ ಓಡಾಟದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಗ್ರಾಮದೊಳಗೆ ಚಿರತೆ ಪ್ರವೇಶಿಸುವ ಮುನ್ನ ಬೋನು ಅಳವಡಿಸಿ ಅದನ್ನು ತಕ್ಷಣವೇ ಸೆರೆಹಿಡಿಯಬೇಕೆಂದು ಹುಣಸನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ರಾಮನಗರ, ಅಕ್ಟೋಬರ್ 18: ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಬೆಂಗಳೂರು ದಕ್ಷಿಣ ಭಾಗದಲ್ಲಿ ಚಿರತೆಗಳ ಹಾವಳಿ ತೀವ್ರಗೊಂಡಿದ್ದು, ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲೇ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಸ್ತೆಯ ಮೇಲೆಯೇ ಮುಕ್ತವಾಗಿ ಓಡಾಡುತ್ತಿದ್ದ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಸವಾರರು ಹಾಗೂ ಗ್ರಾಮಸ್ಥರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಗ್ರಾಮದೊಳಗೆ ಚಿರತೆ ಪ್ರವೇಶಿಸಿ ಸಾರ್ವಜನಿಕರು ಹಾಗೂ ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುವ ಮುನ್ನ, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯಬೇಕೆಂದು ಹುಣಸನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 18, 2026 08:18 AM
Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More