AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಅಶೋಕ್​ ಪೂಜಾರಿ
| Edited By: |

Updated on:Feb 25, 2026 | 12:27 PM

Share

ಮಂಗಳೂರು ನಗರವಾಸಿಗಳಿಗೆ ಇದೀಗ ಚಿರತೆ ಕಾಟದ ಭೀತಿ ಆವರಿಸಿದೆ. ನಗರದ ಕದ್ರಿ ಬಳಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಓಡಾಟ ಮಾಡಿದ್ದು, ಅದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿದ್ದು ಇದೀಗ ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೆ ಈಡು ಮಾಡಿದೆ. ಚಿರತೆ ಓಡಾಟದ ವಿಡಿಯೋ ಇಲ್ಲಿದೆ.

ಮಂಗಳೂರು, ಫೆಬ್ರವರಿ 25: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಚಿರತೆ ಕಾಣಿಸಿಕೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಂಗಳೂರು ನಗರಕ್ಕೇ ಚಿರತೆ ಎಂಟ್ರಿ ಕೊಟ್ಟಿದೆ. ಮಂಗಳೂರಿನ ಕದ್ರಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಒಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಕಾಡುಕೋಣ ಪತ್ತೆಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 25, 2026 12:23 PM

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More