ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ! ಸಿಸಿಟಿವಿ ದೃಶ್ಯ ನೋಡಿ ಬೆಚ್ಚಿಬಿದ್ದ ಜನ
ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ರಾತ್ರಿ ವೇಳೆ ಮನೆಯ ಸಮೀಪವೇ ಚಿರತೆ ಪ್ರತ್ಯಕ್ಷವಾಗಿದ್ದು, ಅದರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳು ಬೊಗಳುತ್ತಿದ್ದಂತೆ ಚಿರತೆ ಅಲ್ಲಿಂದ ಓಡಿಹೋಗಿದ್ದು, ಆತಂಕಗೊಂಡ ಗ್ರಾಮಸ್ಥರು ಚಿರತೆ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ.
ರಾಮನಗರ, ನವೆಂಬರ್ 5: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಮನೆಯೊಂದರ ಸಮೀಪವೇ ಚಿರತೆ ಪ್ರತ್ಯಕ್ಷವಾಗಿದೆ. ಸಾಕು ಪ್ರಾಣಿಗಳ ಬೇಟೆಗೆ ಬಂದಿದ್ದ ಚಿರತೆ, ನಾಯಿಗಳು ಬೊಗಳುತ್ತಿದ್ದಂತೆ ಅಲ್ಲಿಂದ ಓಡಿಹೋಗಿದೆ. ಈ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದಲ್ಲಿ ಚಿರತೆ ಪದೇಪದೇ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆಯನ್ನು ಸೆರೆಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

