ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ಗೆ ಭೇಟಿ ನೀಡುವ ಪ್ರವಾಸಿಗರು ಇನ್ನು ಮುಂದೆ ಬಹಳಷ್ಟು ಎಚ್ಚರಿಕೆ ವಗಿಸಬೇಕಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿವೆ. ಇದೀಗ ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಹಾಗೂ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ವಿಡಿಯೋ ಇಲ್ಲಿದೆ.
ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ.
Published on: Jan 12, 2026 07:52 AM