ಬೆಂಗಳೂರಿನ ನೈಸ್ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ; ಸ್ಥಳೀಯರು ಆತಂಕ
ಮುಖ್ಯಾಂಶಗಳು
- ಬೆಂಗಳೂರಿನಲ್ಲಿ ಮತ್ತೆ ಒಂಟಿ ಚಿರತೆ ಪ್ರತ್ಯಕ್ಷ
- ಸುತ್ತಮುತ್ತ ಅರಣ್ಯ ಪ್ರದೇಶವಿರುವ ರಸ್ತೆಯಲ್ಲಿ ಚಿರತೆ ಓಡಾಟ
- ಚಿರತೆ ಸೆರೆ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳು
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ಹಾಗೂ ಭಾರತ್ ನಗರದಲ್ಲಿ ಇಂದು ಚಿರತೆ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ನೈಸ್ ರಸ್ತೆ ಸಮೀಪ ಬೆಳಗ್ಗೆ 4 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬಲೆ ಹಾಗೂ ಪಟಾಕಿ ಬಳಸಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು, ಜುಲೈ 09: ನಗರದ ಮಾಗಡಿ ಮುಖ್ಯರಸ್ತೆ ಸಮೀಪದ ಬ್ಯಾಡರಹಳ್ಳಿ ಮತ್ತು ಭಾರತ್ ನಗರ ಪ್ರದೇಶಗಳಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಭೀತಿ ಸೃಷ್ಟಿಸಿದೆ. ನೈಸ್ ರಸ್ತೆ ಬಳಿ ಬೆಳಗ್ಗೆ 4 ಗಂಟೆ ಸುಮಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೆಲ ಸ್ಥಳಗಳಲ್ಲಿ ಬಲೆ ಹಾಕಲಾಗಿದ್ದು, ಅದನ್ನು ಹೊರಬರುವಂತೆ ಮಾಡಲು ಪಟಾಕಿ ಸಹ ಹೊಡೆಯಲಾಗಿದೆ. ಸ್ಥಳೀಯರ ಪ್ರಕಾರ, ಕಳೆದ 10 ವರ್ಷಗಳಲ್ಲಿ ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲು. ಸದ್ಯ ಸ್ಥಳೀಯರು ಆತಂಕಗೊಂಡಿದ್ದು, ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

