ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ
ಇತಿಹಾಸ ಪ್ರಸಿದ್ಧ ಮತ್ತು ಕರ್ನಾಟಕದ ಪ್ರಖ್ಯಾತ ಪ್ರವಾಸಿ ತಾಣ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿದೆ. ಇಲ್ಲಿನ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಬಂದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದನ್ನು ನೋಡಿ ಸ್ಥಳೀಯ ನಿವಾಸಿಗಳು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ.
ವಿಜಯನಗರ, ಫೆಬ್ರವರಿ 16: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಶ್ರೀ ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿಯೇ ಚಿರತೆ ಕಂಡು ಬಂದಿರುವುದು ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಓಡ್ಯಾಟದ ದೃಶ್ಯ ಕಂಡು ಜನರು ಭಯಭೀತರಾಗಿದ್ದಾರೆ.