ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ

Edited By:

Updated on: Mar 11, 2026 | 10:33 AM

ಶಿವರಾತ್ರಿ ಜಾತ್ರೆ ವೇಳೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನೋರ್ವನನ್ನು ನರಭಕ್ಷಕ ಚಿರತೆ ಕೊಂದು ತಿಂದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನ ಸವಾರರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಾಮರಾಜನಗರ, ಮಾರ್ಚ್​​ 11: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಓಡಾಟ ಕಂಡುಬಂದಿದ್ದು, ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಜಾತ್ರೆ ವೇಳೆ ಪಾದಯಾತ್ರಿಕನನ್ನು ಚಿರತೆ ಕೊಂದು ತಿಂದಿತ್ತು. ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 11, 2026 10:32 AM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More