ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ: ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಶಿವರಾತ್ರಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಮಾದಪ್ಪನ ದರ್ಶನಕ್ಕೆಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ದೇಗುಲಕ್ಕೆ ತೆರಳುವ ಭಕ್ತರಿಗೆ ಮತ್ತೆ ಚಿರತೆ ಆತಂಕ ಎದುರಾಗಿದೆ. ಬೆಟ್ಟಕ್ಕೆ ತೆರಳುವ ತಾಳುಬೆಟ್ಟದ 4ನೇ ತಿರುವಿನ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ವಾನಹ ಸವಾರರೊಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
ಚಾಮರಾಜನಗರ, ಫೆಬ್ರವರಿ 14: ಶಿವರಾತ್ರಿಗೆ ಇನ್ನೊಂದೇ ದಿನ ಬಾಕಿ ಇರುವಾಗ ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಆತಂಕ ಎದುರಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ತಾಳುಬೆಟ್ಟದ 4ನೇ ತಿರುವಿನ ರಸ್ತೆಯಲ್ಲಿ ಯಾತ್ರಿಕರಿಗೆ ಚಿರತೆ ಕಾಣಿಸಿಕೊಂಡಿದೆ. ರಸ್ತೆಯಲ್ಲೇ ಚಿರತೆ ಕಾಣಿಸಿದ ಕಾರಣ ಮಾದಪ್ಪನ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ವಾಹನಗಳು ಓಡಾಡುತ್ತಿದ್ದರೂ ಕ್ಯಾರೆ ಎನ್ನದೇ ಕುಳಿತಿರುವ ಚಿರತೆಯ ದೃಶ್ಯ ವಾಹನ ಸವಾರರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿರುವ ಸಂದರ್ಭದಲ್ಲೇ ಚಿರತೆ ಕಾಣಿಸಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಇತ್ತೀಚೆಗಷ್ಟೇ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬನನ್ನು ಚಿರತೆ ಹೊತ್ತೊಯ್ದಿತ್ತು.
Published on: Feb 14, 2026 11:21 AM
Latest Videos
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
