ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ: ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

Edited By:

Updated on: Feb 14, 2026 | 11:22 AM

ಶಿವರಾತ್ರಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಮಾದಪ್ಪನ ದರ್ಶನಕ್ಕೆಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ದೇಗುಲಕ್ಕೆ ತೆರಳುವ ಭಕ್ತರಿಗೆ ಮತ್ತೆ ಚಿರತೆ ಆತಂಕ ಎದುರಾಗಿದೆ. ಬೆಟ್ಟಕ್ಕೆ ತೆರಳುವ ತಾಳುಬೆಟ್ಟದ 4ನೇ ತಿರುವಿನ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ವಾನಹ ಸವಾರರೊಬ್ಬರು ಮೊಬೈಲ್​ನಲ್ಲಿ ವಿಡಿಯೋ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.

ಚಾಮರಾಜನಗರ, ಫೆಬ್ರವರಿ 14: ಶಿವರಾತ್ರಿಗೆ ಇನ್ನೊಂದೇ ದಿನ ಬಾಕಿ ಇರುವಾಗ ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಆತಂಕ ಎದುರಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ತಾಳುಬೆಟ್ಟದ 4ನೇ ತಿರುವಿನ ರಸ್ತೆಯಲ್ಲಿ ಯಾತ್ರಿಕರಿಗೆ ಚಿರತೆ ಕಾಣಿಸಿಕೊಂಡಿದೆ. ರಸ್ತೆಯಲ್ಲೇ ಚಿರತೆ ಕಾಣಿಸಿದ ಕಾರಣ ಮಾದಪ್ಪನ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ವಾಹನಗಳು ಓಡಾಡುತ್ತಿದ್ದರೂ ಕ್ಯಾರೆ ಎನ್ನದೇ ಕುಳಿತಿರುವ ಚಿರತೆಯ ದೃಶ್ಯ ವಾಹನ ಸವಾರರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿರುವ ಸಂದರ್ಭದಲ್ಲೇ ಚಿರತೆ ಕಾಣಿಸಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಇತ್ತೀಚೆಗಷ್ಟೇ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬನನ್ನು ಚಿರತೆ ಹೊತ್ತೊಯ್ದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 14, 2026 11:21 AM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More