Textbooks Revision; ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ: ಮಧು ಬಂಗಾರಪ್ಪ, ಶಿಕ್ಷಣ ಸಚಿವ

Textbooks Revision; ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ: ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 15, 2023 | 7:43 PM

ತಜ್ಞರ ಸಲಹೆ ಮತ್ತು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆ ಪರಿಷ್ಕರಣೆ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಬೆಂಗಳೂರು: ಇಂದು ನಡೆದ ಸಂಪುಟ ಸಭೆಯ ನಂತರ ಮಾಧ್ಯಮ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) 6 ರಿಂದ 10 ನೇ ತರಗತಿಯವರೆಗಿನ ಸಾಮಾಜಿಕ ವಿಜ್ಞಾನ (Social Science) ಮತ್ತು ಕನ್ನಡ ಪಠ್ಯ ಪುಸ್ತಕಗಳಲ್ಲಿ (textbooks) ಮಾಡಿರುವ ಪರಿಷ್ಕರಣೆ ಗಳ ಬಗ್ಗೆ ವಿವರಣೆ ನೀಡಿದರು. ಪಠ್ಯಗಳಿಂದ ಹಿಂದಿನ ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು. ಸಾವಿತ್ರಿ ಪುಲೆ, ನೀ ಹೋದ ಮರುದಿನ, ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ತಮ್ಮ ಮಗಳು ಇಂದಿರಾಗಾಂಧಿಯವರಿಗೆ ಬರೆದ ಪತ್ರ ಮೊದಲಾದ ಪಾಠಗಳನ್ನು ಸೇರಿಸಲಾಗಿದೆ ಎಂದು ಸಚಿವರು ಹೇಳಿದರು. ತಜ್ಞರ ಸಲಹೆ ಮತ್ತು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆ ಪರಿಷ್ಕರಣೆ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ