AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಯಾವುದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ: ಡಿಕೆ ಸುರೇಶ್, ಸಂಸದ

ಕುಮಾರಸ್ವಾಮಿ ಯಾವುದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ: ಡಿಕೆ ಸುರೇಶ್, ಸಂಸದ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 21, 2023 | 6:20 PM

ಬೆಂಗಳೂರು ವಿಧಾನ ಸಭೆಯಲ್ಲಿ ಸದನದ ಸದಸ್ಯರಲ್ಲದ ವ್ಯಕ್ತಿಯೊಬ್ಬರು ಅಧಿವೇಶನ ನಡೆಯುತ್ತಿದ್ದಾಗ ಸದನ ಪ್ರವೇಶಿಸಿ ಶಾಸಕರು ಕೂರುವ ಆಸನದಲ್ಲಿ ಕುಳಿತ ಸಂದರ್ಭವನ್ನು ಕುಮಾರಸ್ವಾಮಿಯವರು ಕಳೆದ ವಾರ ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪಕ್ಕೆ ಹೋಲಿಸಿ ಮಾತಾಡಿದ್ದು ಹಾಸ್ಯಾಸ್ಪದ ಎಂದು ಸಂಸದ ಡಿಕೆ ಸುರೇಶ್ ಹೇಳಿದರು

ದೆಹಲಿ: ಕಳೆದ ವಾರ ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪವನ್ನು ಪ್ರಶ್ನಿಸಿ ಸಸ್ಪೆಂಡ್ ಆಗಿರುವ ವಿರೋಧ ಪಕ್ಷಗಳ ಲೋಕಸಭಾ ಮತ್ತು ರಾಜ್ಯ ಸಭಾ ಸದಸ್ಯರು (Lok Sabha and Rajya Sabha MPs) ಸಂಸತ್ ಭವನದ ಆವರಣದಲ್ಲಿ ದರಣಿ ನಡೆಸುತ್ತಿರುವಾಗಲೇ ಬಿಡುವು ಮಾಡಿಕೊಂಡು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh), ಇಂದು ದೆಹಲಿಗೆ ಭೇಟಿ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಭ್ರಮೆಯಲ್ಲಿದ್ದಾರೆ ಮತ್ತು ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ ಅಂತ ಹೇಳಿ, ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡವರು ಬೇರೆಯವರ ಆಶ್ರಯ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ ಮತ್ತು ಮಂಡ್ಯ ಕ್ಷೇತ್ರಗಳಿಂದ ಒತ್ತಡ ಬರುತ್ತಿದೆ ಎಂದು ಕುಮಾರಸ್ವಾಮಿ ಹೇಳಿರುವುದನ್ನು ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಸ್ವಾಗತಿಸುತ್ತೀರಾ ಎಂದು ಸುರೇಶ್ ಅವರನ್ನು ಪತ್ರಕರ್ತರು ಕೇಳಿದಾಗ, ತಾನು ರಾಜಕೀಯಕ್ಕೆ ಬಂದಿದ್ದೇ ಅವರಿಂದ, ಹಾಗಾಗಿ ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸ್ವಾಗತಿಸುವುದಾಗಿ ವ್ಯಂಗ್ಯವಾಗಿ ಹೇಳಿದರು.
.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ