ಕೊಲೆಗಡುಕರಿಗೆ ಶಿಕ್ಷೆ ಆಗಲಿ; ಎಂಎಲ್ಎ ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು(ಜೂ.15) ಚಿತ್ರದುರ್ಗದ ವಿಆರ್ ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಾಸ್ವಾಮಿ ನಿವಾಸಕ್ಕೆ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ(Veerendra Puppy) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಚಿತ್ರದುರ್ಗ, ಜೂ.15: ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದರ ಮಧ್ಯೆ ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ತಂದೆ-ತಾಯಿ ಮತ್ತು ಗರ್ಭಿಣಿಯಾಗಿರುವ ಮೃತನ ಪತ್ನಿ ರೋಧನೆ ಹೇಳತಿರದು. ಇನ್ನು ಇಂದು(ಜೂ.15) ಚಿತ್ರದುರ್ಗದ ವಿಆರ್ ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಾ ಸ್ವಾಮಿ ನಿವಾಸಕ್ಕೆ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ(Veerendra Puppy) ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಘಟನೆ ನಡೆದು ಒಂದು ವಾರದ ಬಳಿಕ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಶಾಸಕರು, ರೇಣುಕಾಸ್ವಾಮಿ ಫೋಟೋಗೆ ಹಾರ ಹಾಕಿ ಸಾಂತ್ವನ ಹೇಳಿದರು. ಈ ವೇಳೆ ಸ್ಥಳೀಯ ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದೇ ವೇಳೆ ಮೃತ ರೇಣುಕಾಸ್ವಾಮಿ ಸ್ವಾಮಿ ಕುಟುಂಬಕ್ಕೆ ವೈಯಕ್ತಿಕವಾಗಿ ಶಾಸಕ ವಿರೇಂದ್ರ ಪಪ್ಪಿ ಎರಡು ಲಕ್ಷ ಪರಿಹಾರ ನೀಡಿದ್ದಾರೆ. ಇದೇ ವೇಳೆ ಮೃತನ ತಾಯಿ ‘ನನ್ನ ಮಗನ ಕೊಲೆಗಡುಕರಿಗೆ ಶಿಕ್ಷೆ ಆಗಲಿ ಎಂದು ಗೋಳಾಡಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

