‘ಜಾತಿ, ಧರ್ಮ, ಜನಾಂಗ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ಮತ ಹಾಕೋಣ’: ಸತೀಶ್ ನೀನಾಸಂ
‘ಒಂದು ವೋಟ್ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು’ ಎಂದು ಸತೀಶ್ ನೀನಾಸಂ ಹೇಳಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭ ಆಗಿದೆ. ಮುಂದಿನ ಅವಧಿಗೆ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕೌತುಕ ಮನೆ ಮಾಡಿದೆ. ರಾಜ್ಯದಲ್ಲಿ ರಾಜಕೀಯದ ಚಟುವಟಿಕೆಗಳು ಗರಿಗೆದರಿವೆ. ಜನರ ಮತಗಳನ್ನು ಸೆಳೆಯಲು ಎಲ್ಲ ರಾಜಕೀಯ ಪಕ್ಷಗಳು ವಿವಿಧ ತಂತ್ರಗಳನ್ನು ರೂಪಿಸುತ್ತಿವೆ. ಈ ಹೊತ್ತಿನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ನಟ ಸತೀಶ್ ನೀನಾಸಂ ಕೂಡ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ‘ಒಂದು ವೋಟ್ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ, ನಾಳೆ ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು. ಜಾತಿ, ಧರ್ಮ, ಜನಾಂಗ, ಭಾಷೆ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ನಾವೆಲ್ಲ ವೋಟ್ ಹಾಕೋಣ. ಒಳ್ಳೆಯ ರಾಜಕಾರಣಿಗಳನ್ನು ಆಯ್ಕೆ ಮಾಡೋಣ’ ಎಂದು ಸತೀಶ್ ನೀನಾಸಂ (Sathish Ninasam) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:37 pm, Fri, 14 April 23