‘ಜಾತಿ, ಧರ್ಮ, ಜನಾಂಗ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ಮತ ಹಾಕೋಣ’: ಸತೀಶ್​ ನೀನಾಸಂ

‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು’ ಎಂದು ಸತೀಶ್​ ನೀನಾಸಂ ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭ ಆಗಿದೆ. ಮುಂದಿನ ಅವಧಿಗೆ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕೌತುಕ ಮನೆ ಮಾಡಿದೆ. ರಾಜ್ಯದಲ್ಲಿ ರಾಜಕೀಯದ ಚಟುವಟಿಕೆಗಳು ಗರಿಗೆದರಿವೆ. ಜನರ ಮತಗಳನ್ನು ಸೆಳೆಯಲು ಎಲ್ಲ ರಾಜಕೀಯ ಪಕ್ಷಗಳು ವಿವಿಧ ತಂತ್ರಗಳನ್ನು ರೂಪಿಸುತ್ತಿವೆ. ಈ ಹೊತ್ತಿನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ನಟ ಸತೀಶ್ ನೀನಾಸಂ ಕೂಡ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ, ನಾಳೆ ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು. ಜಾತಿ, ಧರ್ಮ, ಜನಾಂಗ, ಭಾಷೆ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ನಾವೆಲ್ಲ ವೋಟ್​ ಹಾಕೋಣ. ಒಳ್ಳೆಯ ರಾಜಕಾರಣಿಗಳನ್ನು ಆಯ್ಕೆ ಮಾಡೋಣ’ ಎಂದು ಸತೀಶ್​ ನೀನಾಸಂ (Sathish Ninasam) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Fri, 14 April 23

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us