Koppal News: ಮುಖ್ಯಮಂತ್ರಿಗಳಿಗೆ ಶಾಸಕರು ಪತ್ರ ಬರೆದಿರುವುದು ಸತ್ಯ, ಅದರಲ್ಲಿ ತಪ್ಪೇನಿದೆ? ಬಸವರಾಜ ರಾಯರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 25, 2023 | 7:29 PM

ಅಧಿವೇಶನದ ಕೊನೆಯ ದಿನ ಆಳಂದ ಶಾಸಕ ಬಿಆರ್ ಪಾಟೀಲ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಂತ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ರಾಯರೆಡ್ಡಿ ಹೇಳಿದರು.

ಕೊಪ್ಪಳ: ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ 20 ಶಾಸಕರು ಪತ್ರ ಬರೆದಿರುವುದನ್ನು ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತು ಇತರ ಕೆಲ ಸಚಿವರು ಅಲ್ಲಗಳೆದಿದ್ದರು. ಆದರೆ ಆ ಪತ್ರಕ್ಕೆ ಸಹಿಹಾಕಿರುವವರಲ್ಲಿ ಒಬ್ಬರಾಗಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಅವರು ಸತ್ಯವನ್ನು ಹೊರಗೆಡಗಿದ್ದು ಪತ್ರ ಬರೆದಿರುವುದು ನಿಜ ಆದರೆ, ವಿರೋಧ ಪಕ್ಷದ ನಾಯಕರು ಹೇಳುತ್ತಿರುವ ಸಂಗತಿಯೇನೂ ಪತ್ರದಲ್ಲಿ ಇಲ್ಲ ಎನ್ನುತ್ತಾರೆ. ಅವರು ಹೇಳುವ ಪ್ರಕಾರ ಅಧಿವೇಶನದ ಕೊನೆಯ ದಿನ ಆಳಂದ ಶಾಸಕ ಬಿಆರ್ ಪಾಟೀಲ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ ಸಚಿವರು ಮತ್ತು ಶಾಸಕರ ನಡುವೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಒಂದು ಸಂವಾದ ನಡೆಯುವಂತಾದರೆ ಚೆನ್ನಾಗಿರುತ್ತದೆ ಅಂತ ಪತ್ರದ ಬರೆದಿದ್ದಾರೆ, ಅದಕ್ಕೆ ಯಲಬುರ್ಗಾ ಶಾಸಕ ಕೂಡ ಸಹಿ ಹಾಕಿದ್ದಾರೆ. ಅಭಿವೃದ್ಧಿ ಕಾರ್ಯಗಳಲ್ಲಿ ಸಮನ್ವಯತೆ ಉಂಟಾಗಲು ಶಾಸಕಾಂಗ ಸಭೆ ನಡೆಸುವಂತೆ ಶಾಸಕರು ಬಯಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದರೆ ಅದರಲ್ಲಿ ತಪ್ಪೇನಿದೆ ಅಂತ ಬಸವರಾಜ ರಾಯರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.