ಸಜಾ ಕೈದಿ ಬಿಡುಗಡೆಗೆ ಪತ್ನಿ ದೇಹದ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್
ಸುಪ್ರೀಂ ಕೋರ್ಟ್ ಆದೇಶವನ್ನು ನಕಲು ಮಾಡಿ ಕೈದಿಯನ್ನು ಬಿಡುಗಡೆ ಮಾಡಿಸಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಮಾಜಿ ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಲಾಗಿದ್ದು, ತನಿಖೆಯಲ್ಲಿ ಡಿಐಜಿ ಸೋಮಶೇಖರ್ ಕಾಮಕಾಂಡ ಬಟಾಬಯಲಾಗಿದೆ. ಹೌದು...ಆರೋಪಿಗಳಾದ ಶ್ರೀಕಾಂತ್ ಹಾಗೂ ಡಿಐಜಿ ಸೋಮಶೇಖರ್ ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಸುಪ್ರೀಂಕೋರ್ಟ್‌ನ ಆದೇಶ ನಕಲು ಮಾಡಿ ಕೈದಿ ಎ.ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ.
ಬೆಂಗಳೂರು, (ಅಕ್ಟೋಬರ್ 06): ಸುಪ್ರೀಂ ಕೋರ್ಟ್ ಆದೇಶವನ್ನು ನಕಲು ಮಾಡಿ ಕೈದಿಯನ್ನು ಬಿಡುಗಡೆ ಮಾಡಿಸಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಮಾಜಿ ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಲಾಗಿದ್ದು, ತನಿಖೆಯಲ್ಲಿ ಡಿಐಜಿ ಸೋಮಶೇಖರ್ ಕಾಮಕಾಂಡ ಬಟಾಬಯಲಾಗಿದೆ. ಹೌದು…ಆರೋಪಿಗಳಾದ ಶ್ರೀಕಾಂತ್ ಹಾಗೂ ಡಿಐಜಿ ಸೋಮಶೇಖರ್ ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಸುಪ್ರೀಂಕೋರ್ಟ್‌ನ ಆದೇಶ ನಕಲು ಮಾಡಿ ಕೈದಿ ಎ.ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ. ಅಷ್ಟೇ ಅಲ್ಲದೇ ತನಿಖೆ ವೇಳೆ ಶಂಕರ್ ಪತ್ನಿಗೆ ಡಿಐಜಿ ಸೋಮಶೇಖರ್ ವಿಡಿಯೋ ಕರೆ ಮಾಡಿರೋದು ಪತ್ತೆಯಾಗಿದ್ದು, ವಿಡಿಯೋ ಕಾಲ್‌ನಲ್ಲಿ ವಿವಸ್ತ್ರವಾಗುವಂತೆ ಹೇಳಿದ್ದ ಎನ್ನುವುದು ದೃಢಪಟ್ಟಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು, ವಿಡಿಯೋವನ್ನು ವಶಕ್ಕೆ ಪಡೆದು ಎಫ್ಎಸ್ಎಲ್‌ಗೆ ಕಳುಹಿಸಿದ್ದಾರೆ.

