ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಐತಿಹಾಸಿಕ ತೀರ್ಪು ಎಂದ ಲಾಯರ್
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ದ್ವೇಷದಿಂದ ನಡೆದ ಈ ಭೀಕರ ಕೊಲೆಯನ್ನು ಸಿಬಿಐ ತನಿಖೆ ನಡೆಸಿತ್ತು. ಕುಟುಂಬಕ್ಕೆ 16 ಲಕ್ಷ ರೂಪಾಯಿ ಪರಿಹಾರವನ್ನೂ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರು, ಏಪ್ರಿಲ್ 17: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬಳಿಕ 10 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ವಕೀಲ ಶಿವಾನಂದ ಪೆರ್ಲಾ ಮಾತನಾಡಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದಿದ್ದಾರೆ. 15 ಜೂನ್ 2016 ರಂದು ಧಾರವಾಡದ ಉದಯ ಜಿಮ್‌ನಲ್ಲಿ ಯೋಗೇಶ್ ಗೌಡ ಅವರ ಭೀಕರ ಕೊಲೆಯಾಗಿತ್ತು. ಪ್ರಕರಣದ ಪ್ರಾರಂಭದಲ್ಲಿ ಧಾರವಾಡ ಪೊಲೀಸರು ಬಸವರಾಜ್ ಮುತ್ತಕಿ ಮತ್ತು ಐದು ಇತರರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ನಂತರ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. ಒಟ್ಟು 21 ಜನರ ಮೇಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
