ಕಲಬುರಗಿ: ಗ್ಯಾರಂಟಿಗಳಿಂದ ಜೀವನ ನಡೆಯಲ್ಲ; ಮಾಜಿ ಸಚಿವ ಬಿ.ಶ್ರೀರಾಮುಲು
ರಾಜ್ಯದಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ವಿಧಾನಸೌಧದ ಕೆಳ ಮಹಡಿಯಿಂದ ಮೂರನೇ ಮಹಡಿವರೆಗೂ ಕಾಂಗ್ರೆಸ್ ಸರ್ಕಾರದಲ್ಲಿ ಶೇ.50ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಸಿಎಂ, ಮಂತ್ರಿಗಳು ಮತ್ತು ಶಾಸಕರ ನಡುವೆ ಹೊಂದಾಣಿಕೆ ಇಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ಕಲಬುರಗಿ, ಸೆ.01: ಕಾಂಗ್ರೆಸ್ ಸರ್ಕಾರದಲ್ಲಿ ಶೇ.50ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮಲು (B Sriramulu) ಹೇಳಿದರು. ಕಲಬುರಗಿ (Kalaburagi) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದೀರಾ, ಆದರೆ ಎಂದಾದರೂ ಸಾರಿಗೆ ನೌಕರರ ಸಂಬಳದ ಬಗ್ಗೆ ಯೋಚನೆ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಇವತ್ತು ಅವರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಖಜಾನೆಯನ್ನು ಖಾಲಿ ಮಾಡಿಕೊಂಡು ಕೂತಿದ್ದೀರಾ ಎಂದರು.
ಇದೇ ವೇಳೆ ರಾಜ್ಯದಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ವಿಧಾನಸೌಧದ ಕೆಳ ಮಹಡಿಯಿಂದ ಮೂರನೇ ಮಹಡಿವರೆಗೂ ಕಾಂಗ್ರೆಸ್ ಸರ್ಕಾರದಲ್ಲಿ ಶೇ.50ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಸಿಎಂ, ಮಂತ್ರಿಗಳು ಮತ್ತು ಶಾಸಕರ ನಡುವೆ ಹೊಂದಾಣಿಕೆ ಇಲ್ಲ. ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಭ್ರಷ್ಟಾಚಾರ ಹೊರಗೆ ಬರಬಾರದು ಎಂದು ಜನರ ದಿಕ್ಕು ತಪ್ಪಿಸಲು ಆಪರೇಷನ್ ಹಸ್ತ ಎನ್ನುವ ಸುಳ್ಳು ಸುದ್ದಿಯನ್ನು ಸೃಷ್ಟಿಸುತ್ತಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ