ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ: ಸರ್ಕಾರಿ ವಕೀಲರ ಪ್ರತಿಕ್ರಿಯೆ ಹೇಗಿತ್ತು ನೋಡಿ

Updated on: Aug 02, 2025 | 5:43 PM

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಲಕ್ಷಾಂತರ ರೂಪಾಯಿ ದಂಡವನ್ನು ಸಹ ವಿಧಿಸಿದೆ. ಈ ದಂಡದಲ್ಲಿ 11.25 ಲಕ್ಷ ರೂಪಾಯಿಗಳನ್ನು ಸಂತ್ರಸ್ತೆಗೆ ನೀಡಲು ಆದೇಶಿಸಿದೆ. ಈ ಬಗ್ಗೆ ಸಂತ್ರಸ್ತೆ ಪರ ವಾದ ಮಂಡಿಸಿದ್ದ ಸರ್ಕಾರ ವಕೀಲರ ಪ್ರತಿಕ್ರಿಯೆ ಇಲ್ಲಿದೆ.

ಬೆಂಗಳೂರು, ಆಗಸ್ಟ್ 2: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಈ ಬಗ್ಗೆ ಸರ್ಕಾರಿ ವಕೀಲ ಎಸ್​​ಪಿಪಿ ಅಶೋಕ್ ನಾಯಕ್ ಪ್ರತಿಕ್ರಿಯಿಸಿದ್ದು, ನ್ಯಾಯಾಲಯವು ಸಮಾಜಕ್ಕೆ ಒಂದು ಕಠಿಣ ಸಂದೇಶ ರವಾನಿಸಿದೆ ಎಂದಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಜೀವಾವಧಿ ಶಿಕ್ಷೆ ಅಂದರೆ, ಆ ಕಾನೂನಿನಲ್ಲಿ ಇರುವಂತೆ ಸಂಪೂರ್ಣ ಜೀವನದುದ್ದಕ್ಕೂ ಜೈಲಿನಲ್ಲಿ ಇರಬೇಕಾಗುತ್ತದೆ. ಅಷ್ಟೇ ಅಲ್ಲದೆ, ನಾವು ಪ್ರಾಸಿಕ್ಯೂಷನ್ ಪರವಾಗಿ ಯಾವ್ಯಾವ ಕಲಂಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದೆವೋ ಆ ಎಲ್ಲಾ ಕಲಂಗಳ ಅಡಿಯಲ್ಲಿಯೂ ಸಹ ಪ್ರತ್ಯೇಕ ಪ್ರತ್ಯೇಕ ಶಿಕ್ಷೆಗಳನ್ನು ವಿಧಿಸಿದೆ. ಒಂದು ವಿಶೇಷವಾದ ಗರಿಷ್ಠ ಪ್ರಮಾಣದ ಶಿಕ್ಷೆಯನ್ನು ಮಾನ್ಯ ನ್ಯಾಯಾಲಯ ವಿಧಿಸುವುದರ ಮೂಲಕ ಕಾನೂನು ಮುರಿಯುವವರಿಗೆ ಒಂದು ಕಠಿಣ ಸಂದೇಶವನ್ನು ರವಾನಿಸಿದೆ ಎಂದು ಅಶೋಕ್ ನಾಯಕ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ