Video: ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ

Updated on: Dec 01, 2024 | 9:31 AM

ಘಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಪ್ರದೇಶದಲ್ಲಿರುವ ಸೂಪರ್‌ಟೆಕ್ ಲಿವಿಂಗ್‌ಸ್ಟನ್ ಸೊಸೈಟಿಯಲ್ಲಿ ಲಿಫ್ಟ್​ ಕೆಟ್ಟು ನಿಂತು ಜನರು ಪರದಾಡಿರುವ ವಿಡಿಯೋ ವೈರಲ್ ಆಗಿದೆ. ಲಿಫ್ಟ್​ ಎರಡು ಫ್ಲೋರ್​ಗಳ ನಡುವೆ ಕೆಟ್ಟು ನಿಂತಿದ್ದು, ಸಾರ್ವಜನಿಕರ ಸಹಾಯದಿಂದ 7 ಮಂದಿಯನ್ನು ರಕ್ಷಿಸಲಾಗಿದೆ. ಲಿಫ್ಟ್​ನಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಘಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಪ್ರದೇಶದಲ್ಲಿರುವ ಸೂಪರ್‌ಟೆಕ್ ಲಿವಿಂಗ್‌ಸ್ಟನ್ ಸೊಸೈಟಿಯಲ್ಲಿ ಲಿಫ್ಟ್​ ಕೆಟ್ಟು ನಿಂತು ಜನರು ಪರದಾಡಿರುವ ವಿಡಿಯೋ ವೈರಲ್ ಆಗಿದೆ. ಲಿಫ್ಟ್​ ಎರಡು ಫ್ಲೋರ್​ಗಳ ನಡುವೆ ಕೆಟ್ಟು ನಿಂತಿದ್ದು, ಸಾರ್ವಜನಿಕರ ಸಹಾಯದಿಂದ 7 ಮಂದಿಯನ್ನು ರಕ್ಷಿಸಲಾಗಿದೆ. ಲಿಫ್ಟ್​ನಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನೆಲ ಮಹಡಿಯಿಂದ ಒಂದೇ ಮಹಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದರಿಂದ ಯಾವುದೇ ತೊಂದರೆಯಾಗಿಲ್ಲ. ಲಿಫ್ಟ್ ಸಾಕಷ್ಟು ಹಳೆಯದಾಗಿದೆ ಮತ್ತು ಆಗಾಗ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಸೊಸೈಟಿಯವರು ಹೇಳಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More