ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ

Edited By:

Updated on: Apr 21, 2026 | 5:01 PM

ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ, ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ.

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ.

ಇಂದು (ಏಪ್ರಿಲ್ 21) ಬೆಂಗಳೂರಿನಲ್ಲಿ ಮಾತನಾಡಿದ ರಾಜಣ್ಣ, ನನ್ನ ಅನುಭವದ ಪ್ರಕಾರ ನಾನು ಸಿಎಂ ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಸಿಎಂ ಇಷ್ಟೊಂದು ಅಸಹಾಯಕರಾಗಿದ್ದಾರೆ ಅನ್ನೋದನ್ನ ನೋಡಿದ್ರೆ ಅವರ ಮೇಲೆ ಯಾರಾದ್ರು ಮಾಟ ಮಂತ್ರ ಮಾಡಿದ್ದಾರೋ ಎನೋ ಅನ್ನಿಸುತ್ತಿದೆ. ಆ ಬಗ್ಗೆ ನಾನು ವಿಚಾರ ಮಾಡುತ್ತಿದ್ದೇನೆ. ಅದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ. ಮನುಷ್ಯರ ಮೇಲೆ ಪರಿಣಾಮ ಆಗಬೇಕು ಅಂದ್ರೆ ಅವರು ಆಸ್ತಿಕರಾಗಿರಬೇಕು ಅಂತ ಇಲ್ಲ. ಸಿಎಂ ಹಾಗೂ ನಾನು ಮಾಟ ಮಂತ್ರದಲ್ಲಿ ನಂಬಿಕೆ ಇಲ್ಲದವರು. ನಾನು ಸಿಎಂ ಅವರು ಅಸಹಾಯಕರು ಅಂತಾ ಹೇಳಿದ ಮೇಲೆ ಅವರು ಕರೆದು ಮಾತನಾಡಿದ್ದಾರೆ. ಗಟ್ಟಿಯಾಗಿ ನಿಲ್ಲಿ ಅಂತ ಹೇಳಿಸಿಕೊಳ್ಳುವಷ್ಟು ಅಸಹಾಯಕತೆ ಸಿಎಂಗೆ ಬಂದಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More