ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ
ಅರವಿಂದ್ ಕೇಜ್ರಿವಾಲ್ ಪಾದಯಾತ್ರೆ ನಡೆಸುತ್ತಿದ್ದಾಗ ಅಪರಿಚಿತರು ದಾಳಿ ನಡೆಸಲು ಯತ್ನಿಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ಆ ಪ್ರಯತ್ನವನ್ನು ವಿಫಲಗೊಳಿಸಿದರು.
ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಗುರುವಾರ ನಡೆದ ಪಾದಯಾತ್ರೆಯಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬರು ದ್ರವವನ್ನು ಎಸೆಯಲು ಪ್ರಯತ್ನಿಸಿದರು. ಕೇಜ್ರಿವಾಲ್ ಅವರು ತಮ್ಮ ಪಕ್ಷದ ಅಸ್ತಿತ್ವವನ್ನು ಬಲಪಡಿಸುವ ಮತ್ತು ಪ್ರದೇಶದ ಮತದಾರರೊಂದಿಗೆ ಸಂಪರ್ಕ ಸಾಧಿಸುವ ಅಭಿಯಾನದ ಭಾಗವಾಗಿ ಸಾರ್ವಜನಿಕರೊಂದಿಗೆ ತೊಡಗಿಸಿಕೊಂಡಿದ್ದಾಗ ಈ ಘಟನೆ ಸಂಭವಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos