ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ,ಸೋಮವಾರ ಮಧ್ಯಾಹ್ನ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದ್ದು, ಜನ ಹೆಚ್ಚು ಸೇರುವ ನಿರೀಕ್ಷೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು (ಜುಲೈ 19) ಹಾಗೂ ಸೋಮವಾರ (ಜುಲೈ 20) ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಗಣ್ಯಾತಿ ಗಣ್ಯರು ಭಾಗಿ ಹಿನ್ನೆಲೆಯಲ್ಲಿ 5 ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಹರದನಹಳ್ಳಿಯಲ್ಲಿ 2, ಹೊಳೆನರಸೀಪುರದಲ್ಲಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಇನ್ನು ಸಿಎಂ ಡಿ.ಕೆ.ಶಿವಕುಮಾರ್ ನಾಳೆ ಮಧ್ಯಾಹ್ನ 3 ಗಂಟೆಗೆ ಆಗಮಿಸುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಸಕಲ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ,ಸೋಮವಾರ ಮಧ್ಯಾಹ್ನ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದ್ದು, ಜನ ಹೆಚ್ಚು ಸೇರುವ ನಿರೀಕ್ಷೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು (ಜುಲೈ 19) ಹಾಗೂ ಸೋಮವಾರ (ಜುಲೈ 20) ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಣ್ಯಾತಿ ಗಣ್ಯರು ಭಾಗಿ ಹಿನ್ನೆಲೆಯಲ್ಲಿ 5 ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಹರದನಹಳ್ಳಿಯಲ್ಲಿ 2, ಹೊಳೆನರಸೀಪುರದಲ್ಲಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಇನ್ನು ಸಿಎಂ ಡಿ.ಕೆ.ಶಿವಕುಮಾರ್ ನಾಳೆ ಮಧ್ಯಾಹ್ನ 3 ಗಂಟೆಗೆ ಆಗಮಿಸುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
