ಜಿಲ್ಲೆಗಳ ಪ್ರತಿ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ವರದಿ ಕೊಡಿ: ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

Updated on: Jun 04, 2026 | 4:01 PM

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಲ್ಲಾ ಇಲಾಖೆಗಳಿಗೆ ಬಾಕಿ ಉಳಿದಿರುವ ಕೆಲಸಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಅಧಿಕಾರಿಗಳು ಜಿಲ್ಲೆಗಳ ಸಮಸ್ಯೆಗಳನ್ನು ಪಟ್ಟಿ ಮಾಡಿ ವರದಿ ಸಲ್ಲಿಸಬೇಕು. ಹೊಸ ಯೋಜನೆಗಳನ್ನು ಗುರುತಿಸಿ, ಆರ್ಥಿಕ ಮಿತಿಯೊಳಗೆ ಪರಿಹಾರ ಕಂಡುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಸಕಾರಾತ್ಮಕ ವಿಧಾನದೊಂದಿಗೆ ಕೆಲಸ ಮಾಡುವಂತೆ ತಿಳಿಸಿದ್ದಾರೆ.

ಬೆಂಗಳೂರು, ಜೂನ್ 4: ಎಲ್ಲಾ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಗಳ ಪ್ರತಿಯೊಂದು ಸಮಸ್ಯೆಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಜಿಲ್ಲಾ ಉಸ್ತುವಾರಿ ಸಚಿವರು ಆ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗುವುದು. ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ಇಲಾಖೆಗೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳ ಪಟ್ಟಿಯನ್ನು ಒದಗಿಸಬೇಕು. ಇದಲ್ಲದೆ, 25 ದಿನಗಳೊಳಗೆ, ಬಾಕಿ ಕೆಲಸಗಳ ಜೊತೆಗೆ, ಆಯಾ ಜಿಲ್ಲೆಗೆ ಸಂಬಂಧಿಸಿದಂತೆ ಹೊಸದಾಗಿ ಏನು ಮಾಡಬಹುದು, ಆರ್ಥಿಕ ವ್ಯವಸ್ಥೆಯ ಮಿತಿಯೊಳಗೆ ಯಾವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಪಟ್ಟಿಯನ್ನೂ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ನನಗೆ ಇತಿಹಾಸ ಬರೆಯಲು ಅಥವಾ ಓದಲು ಇಷ್ಟವಿಲ್ಲ. ಇತಿಹಾಸ ನಿರ್ಮಾಣ ಮಾಡಬೇಕು. ಏನಾದರೂ ಸಾಕ್ಷಿ ಗುಡ್ಡಗಳನ್ನು ಬಿಟ್ಟು ಹೋಗಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಕಾರಾತ್ಮಕ ಮನೋಭಾವ ಮತ್ತು ವ್ಯವಸ್ಥೆಯೊಳಗೆ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಕೆಲಸ ಮಾಡುವಂತೆ ಅವರು ಕರೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More