ಕರ್ನಾಟಕದಿಂದ ಸ್ಪರ್ಧಿಸಲಿರುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದು ಅಂತಿಮಗೊಳ್ಳಬಹುದು: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2024 | 12:33 PM

ಬಿಜೆಪಿ ನಾಯಕರೆಲ್ಲ ಬಿಜೆಪಿ-ಜೆಡಿಎಸ್ ಮೈತ್ರಿ ಎಲ್ಲ 28 ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿದ್ದರೆ ಯಡಿಯೂರಪ್ಪ 28ರಲ್ಲಿ 25 ಗೆಲ್ಲಲಿದ್ದೇವೆ ಎನ್ನುತ್ತಾರೆ. ಇದೇ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕ ಪ್ರವಾಸ ಮಾಡಲಿರುವುದರಿಂದ ಅವರ ಸಭೆಗಳಿಗೆ ಹೆಚ್ಚೆಚ್ಚು ಜನರನ್ನು ಸೇರಿಸಬೇಕಿದೆ ಎಂದು ಹೇಳಿದ ಯಡಿಯೂರಪ್ಪ, ಮೈಸೂರು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ ಒಡೆಯರ್ ಸ್ಪರ್ಧಿಸುವುದು ಖಚಿತವೇ ಎಂದು ಕೇಳಿದ ಪ್ರಶ್ನೆಗೆ ಯಾವುದೇ ಕ್ಷೇತ್ರದ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ ಎಂದರು.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮಗಗೊಳಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಇವತ್ತು ಸಾಯಂಕಾಲ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅಲ್ಲೇ ಇದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವವರ (PM Narendra Modi) ಸಮಕ್ಷಮ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು. ಬಿಜೆಪಿ ನಾಯಕರೆಲ್ಲ ಬಿಜೆಪಿ-ಜೆಡಿಎಸ್ ಮೈತ್ರಿ ಎಲ್ಲ 28 ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿದ್ದರೆ ಯಡಿಯೂರಪ್ಪ 28ರಲ್ಲಿ 25 ಗೆಲ್ಲಲಿದ್ದೇವೆ ಎನ್ನುತ್ತಾರೆ. ಇದೇ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕ ಪ್ರವಾಸ ಮಾಡಲಿರುವುದರಿಂದ ಅವರ ಸಭೆಗಳಿಗೆ ಹೆಚ್ಚೆಚ್ಚು ಜನರನ್ನು ಸೇರಿಸಬೇಕಿದೆ ಎಂದು ಹೇಳಿದ ಯಡಿಯೂರಪ್ಪ, ಮೈಸೂರು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ ಒಡೆಯರ್ ಸ್ಪರ್ಧಿಸುವುದು ಖಚಿತವೇ ಎಂದು ಕೇಳಿದ ಪ್ರಶ್ನೆಗೆ ಯಾವುದೇ ಕ್ಷೇತ್ರದ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯಡಿಯೂರಪ್ಪ ಶಿಕಾರಿಪುರದ ಅನಭಿಷಿಕ್ತ ದೊರೆ: ಬಿರುದು ಕೊಟ್ಟ ಕಾಂಗ್ರೆಸ್ ಶಾಸಕ ತಮ್ಮಯ್ಯ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.