BSY in Shivamogga | ಸಿಡಿಗಳ ಬಗ್ಗೆ ತಲೆಬುಡ ನನಗೆ ಗೊತ್ತಿಲ್ಲ, ಹಾಗಾಗಿ ಕಾಮೆಂಟ್ ಮಾಡಲಾರೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 1:15 PM

ಸಿಡಿಗಳ ವಿಚಾರ ಪುನಃ ಮುನ್ನೆಲೆಗೆ ಬರುತ್ತಿದೆ ಅಂತ ಪತ್ರಕರ್ತರು ಬಿಎಸ್​ವೈ ಗಮನ ಸೆಳೆದಾಗ, ಅವುಗಳ ತಲೆಬುಡ ತನಗೆ ಗೊತ್ತಿಲ್ಲ ಹಾಗಾಗಿ ಕಾಮೆಂಟ್ ಮಡೋದು ಸರಿಯಲ್ಲ ಎಂದು ಹೇಳಿದರು.

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಂಥ ನಾಯಕ ಸಿಕ್ಕಿರುವುದು ನಮ್ಮ ಸೌಭಾಗ್ಯ, ಅವರ ಮುಂದಾಳತ್ವದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರೋದಿ ನಿಶ್ಚಿತ ಎಂದು ಪಕ್ಷದ ವರಿಷ್ಠ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಮಂಗಳವಾರ ಶಿವಮೊಗ್ಗದಲ್ಲಿ ಹೇಳಿದರು. ಚುನಾವಣೆ (polls) ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಸಿಡಿಗಳ ವಿಚಾರ ಪುನಃ ಮುನ್ನೆಲೆಗೆ ಬರುತ್ತಿದೆ ಅಂತ ಪತ್ರಕರ್ತರು ಅವರ ಗಮನ ಸೆಳೆದಾಗ, ಅವುಗಳ ತಲೆಬುಡ ತನಗೆ ಗೊತ್ತಿಲ್ಲ ಹಾಗಾಗಿ ಕಾಮೆಂಟ್ ಮಡೋದು ಸರಿಯಲ್ಲ ಎಂದು ಹಿರಿಯ ಮುತ್ಸದ್ದಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.