ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್ -ಲಕ್ಷ್ಮೀ‌ ಹೆಬ್ಬಾಳ್ಕರ್

ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್ -ಲಕ್ಷ್ಮೀ‌ ಹೆಬ್ಬಾಳ್ಕರ್

ಆಯೇಷಾ ಬಾನು
|

Updated on: Jun 24, 2024 | 4:30 PM

ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲೇ lkg, ukg ಮಾಡಬೇಕೆಂಬ ಶಿಕ್ಷಣ ಇಲಾಖೆಯ ಕಳಕಳಿ ಇದೆ. 40 ವರ್ಷಗಳಿಂದ ನಾವು ಕೆಲಸ ಮಾಡ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಯ್ತು ಎಂದು ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು, ಜೂನ್.24: ಅಂಗನವಾಡಿ ಕಾರ್ಯಕರ್ತೆಯರ (Anganwadi Workers) ಪ್ರತಿಭಟನೆ ಹಿನ್ನೆಲೆ ಎಲ್​ಕೆಜಿ, ಯುಕೆಜಿ ಪ್ರಾರಂಭಕ್ಕೆ ಚಿಂತನೆ ನಡೆದಿದೆ. ಶಾಲೆಗಳಲ್ಲಿ‌ ಮಾಡಲು ಚಿಂತನೆ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡ್ತಿದ್ದಾರೆ. ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲೇ lkg, ukg ಮಾಡಬೇಕೆಂಬ ಶಿಕ್ಷಣ ಇಲಾಖೆಯ ಕಳಕಳಿ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ. 40 ವರ್ಷಗಳಿಂದ ನಾವು ಕೆಲಸ ಮಾಡ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಯ್ತು ಎಂದು ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.

9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾರ್ನ್ ಡಿಪಾರ್ಟ್ ಮೆಂಟ್ ಅಪ್ರೂವಲ್ ಪಡೆದು ಮಾಡೋಣ ಎಂದಿದ್ದಾರೆ. ಪ್ರಸ್ತುತ 2900 ಶಾಲೆಗಳಲ್ಲಿ ಸುತ್ತೋಲೆ ತಂದಿದ್ದಾರೆ. ಎಲ್ ಕೆಜಿ, ಯುಕೆಜಿ ಮಾಡೋಕೆ ಸುತ್ತೋಲೆ ಹೊರಡಿಸಿದ್ದಾರೆ, ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ