AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!

ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 15, 2026 | 1:52 PM

Share

ದಾವಣಗೆರೆಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ವಿಚ್ಛೇದನಕ್ಕೆ ಬಂದಿದ್ದ 37 ದಂಪತಿಗಳು ಪರಸ್ಪರ ಹಾರ ಬದಲಿಸಿಕೊಂಡು, ಮತ್ತೆ ಒಂದಾಗಿ ಬಾಳಲು ನಿರ್ಧರಿಸಿದ್ದಾರೆ. ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಈ ಘಟನೆಗೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಕೆ.ವೇಲಾ ಶುಭ ಹಾರೈಸಿದರು. ಈ ಲೋಕ ಅದಾಲತ್ ಮೂಲಕ ಸುಮಾರು 500 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ಬಗೆಹರಿಸಲಾಗಿದೆ.

ದಾವಣಗೆರೆ, ಮಾರ್ಚ್ 15: ದಾವಣಗೆರೆಯಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳು ಪರಸ್ಪರ ಹಾರ ಬದಲಿಸಿಕೊಂಡು ಮತ್ತೆ ಒಂದಾಗಿ ಬಾಳಲು ನಿರ್ಧಾರ ಮಾಡಿದ್ದಾರೆ. ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಲಾದ ಈ ಮಹತ್ವದ ವಿದ್ಯಮಾನಕ್ಕೆ ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ.ವೇಲಾ ಅವರು ಶುಭ ಹಾರೈಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾಯಾಂಗ ಅಧಿಕಾರಿಯೊಬ್ಬರು, ಈ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ರಾಷ್ಟ್ರೀಯ ಲೋಕ ಅದಾಲತ್‌ಗಳ ಜವಾಬ್ದಾರಿಯನ್ನು ನಿಭಾಯಿಸಿ, ಅಂದಾಜು 500 ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More