ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ? ಇಲ್ಲಿದೆ ಮಾಹಿತಿ

Updated on: Apr 16, 2026 | 9:37 AM

ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಯೋಜಿಸಿದೆ. ಪ್ರಸ್ತುತ ಇರುವ 543 ಸ್ಥಾನಗಳನ್ನು 816-850ಕ್ಕೆ ಏರಿಸುವ ಸಾಧ್ಯತೆ ಇದೆ. 2011ರ ಜನಗಣತಿ ಅಥವಾ ಶೇ 50 ಹೆಚ್ಚಳದ ಸೂತ್ರದಂತೆ ಬದಲಾವಣೆ ನಿರೀಕ್ಷಿಸಲಾಗಿದೆ. ಇದರಿಂದ ಕರ್ನಾಟಕದಲ್ಲಿ 28ರಿಂದ 41-42 ಸ್ಥಾನಗಳಿಗೆ ಏರಿಕೆಯಾಗುವ ನಿರೀಕ್ಷೆಯಿದೆ. ಈ ಕುರಿತು ಸಂಸತ್‌ನಲ್ಲಿ ಚರ್ಚೆ ನಡೆಯಲಿದೆ.

ಬೆಂಗಳೂರು, ಏಪ್ರಿಲ್ 16: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ರೂಪಿಸಿದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 816 ಅಥವಾ 850ಕ್ಕೆ ಏರಿಸುವ ಸಾಧ್ಯತೆ ಇದೆ. ಇದು ಹಲವು ದಶಕಗಳ ನಂತರ ದೇಶದ ಲೋಕಸಭಾ ಸ್ಥಾನಗಳಲ್ಲಿ ನಡೆಯುತ್ತಿರುವ ಅತಿ ದೊಡ್ಡ ಹೆಚ್ಚಳವಾಗಿದೆ. ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರಬಹುದು. ಒಂದು ವೇಳೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಾದರೆ, ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಸ್ಥಾನಗಳು 2011ರ ಜನಗಣತಿ ಆಧಾರದಲ್ಲಿ 41ಕ್ಕೆ ಅಥವಾ ಶೇ 50 ಹೆಚ್ಚಳ ಸೂತ್ರದ ಪ್ರಕಾರ 42ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಯಾವ್ಯಾವ ರಾಜ್ಯಗಳಲ್ಲಿ ಲೆಕ್ಕಾಚಾರ ಹೇಗೆ ಬದಲಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More