Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Manifesto Release Program Live: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಲೈವ್ ಆಗಿ ನೋಡಿ

BJP Manifesto Release Program Live: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಲೈವ್ ಆಗಿ ನೋಡಿ

ವಿವೇಕ ಬಿರಾದಾರ
|

Updated on:Apr 14, 2024 | 9:22 AM

ಲೋಕಸಭಾ ಚುನಾವಣೆಗೆ ಇಂದು (ಏ.13) ಬಿಜೆಪಿ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು.

2024ರ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ಸರ್ವ ಸನ್ನದ್ಧವಾಗಿದೆ. ಲೋಕಸಭಾ ಚುನಾವಣೆಗೆ ಇಂದು (ಏ.13) ಬಿಜೆಪಿ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆ ಮೋದಿ ಕಿ ಗ್ಯಾರಂಟಿ ಎಂಬ ಘೋಷಣೆ ಮೊಳಗಿದವು. ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಜೈಶಂಕರ್ ಭಾಗಿವಹಿಸಿದರು. ಇಂದು ಡಾ. ಬಿಆರ್ ಅಂಬೇಡ್ಕರ್ ಜನ್ಮದಿನ. ಪ್ರಣಾಳಿಕೆ ಬಿಡುಗಡೆಗು ಮುನ್ನ ಪ್ರಧಾನಿ ಮೋದಿ ಅಂಬೇಡ್ಕರ್​ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Published on: Apr 14, 2024 09:20 AM