Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಕಾಂಗ್ರೆಸ್ನ ಸ್ಟಾರ್ ಪ್ರಚಾರಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಬೀಡು ಬಿಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು (ಏ.27) ಕೂಡ ಕಲಬುರಗಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 10.30ಕ್ಕೆ ಕಲಬುರಗಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇನ್ನು ಉಳಿದಿದ್ದು ಎರಡನೇ ಹಂತದ ಮತದಾನ. ಈ ಎರಡನೇ ಹಂತದ ಮತದಾನ ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ನಡೆಯಲಿದೆ. . ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆಯಲ್ಲಿ ಸ್ಟಾರ್ ಪ್ರಚಾರಕರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ. ಕಾಂಗ್ರೆಸ್ನ ಸ್ಟಾರ್ ಪ್ರಚಾರಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಬೀಡು ಬಿಟ್ಟಿದ್ದಾರೆ. ಕಲಬುರಗಿಯಲ್ಲಿ ಶುಕ್ರವಾರ ಪ್ರಚಾರ ನಡೆಸಿದ ಸಿಎಂ ಸಿದ್ದಾರಾಮಯ್ಯ ಅಲ್ಲೇ ವಾಸ್ತವ್ಯ ಹೂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು (ಏ.27) ಕೂಡ ಕಲಬುರಗಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 10.30ಕ್ಕೆ ಕಲಬುರಗಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.