MP Sumalatha Ambareesh: ಮಂಡ್ಯದಲ್ಲಿ ಸುಮಲತಾ ಮಹತ್ವದ ಘೋಷಣೆ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಈ ಪ್ರಶ್ನೆ ಸಂಸದೆ ಸುಮಲತಾ ಅಂಬರೀಶ್ ಇಂದು ಮಂಡ್ಯದಲ್ಲಿ ಉತ್ತರ ನೀಡಲಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ತಪ್ಪಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ ಜಿಡಿಎಸ್ ಬಿಟ್ಟುಕೊಂಟ್ಟಿದ್ದು, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಟಿಕೆಟ್ ಕೈತಪ್ಪಿದ್ದರಿಂದ ಸುಮಲತಾ ಅಂಬರೀಶ್ ಕಳೆದ ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದಾರೆ. ಇತ್ತೀಚಿಗೆ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿವೈ ವಿಜಯೇಂದ್ರ ಸುಮಲತಾ ಅಂಬರೀಶ್ ಅವರನ್ನು ಭೇಟಿ ಮಾಡಿ, ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ ಕೂಡ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಈ ಪ್ರಶ್ನೆ ಸಂಸದೆ ಸುಮಲತಾ ಅಂಬರೀಶ್ ಇಂದು ಮಂಡ್ಯದಲ್ಲಿ ಉತ್ತರ ನೀಡಲಿದ್ದಾರೆ.
Published on: Apr 03, 2024 11:39 AM
Latest Videos