ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಅಸಮಾಧಾನ ಸ್ಫೋಟ; ಬೆಂಬಲಿಗರ ನಡುವೆ ಗಲಾಟೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 11, 2024 | 8:10 PM

ಲೋಕಸಭಾ ಕಾವು ಜೋರಾಗಿದ್ದು, ಈ ಮಧ್ಯೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ(BJP) ಮುಖಂಡರ ಅಸಮಾಧಾನ ಸ್ಫೋಟವಾಗಿದ್ದು, ಜಿಲ್ಲೆಯ ಬಂಗಾರಪೇಟೆಯಲ್ಲಿ(Bangarapet)  ಸಂಸದ ಮುನಿಸ್ವಾಮಿ ಮತ್ತು ಮಾಜಿ ಶಾಸಕ ವೆಂಕಟಮುನಿಯಪ್ಪ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಎಸ್​ಸಿ ಸಮುದಾಯದ ಸಭೆಗೆ ಕರೆದಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

ಕೋಲಾರ, ಏ.11: ಕೋಲಾರ ಕ್ಷೇತ್ರದಲ್ಲಿ ಬಿಜೆಪಿ(BJP) ಮುಖಂಡರ ಅಸಮಾಧಾನ ಸ್ಫೋಟವಾಗಿದ್ದು, ಜಿಲ್ಲೆಯ ಬಂಗಾರಪೇಟೆಯಲ್ಲಿ(Bangarapet)  ಸಂಸದ ಮುನಿಸ್ವಾಮಿ ಮತ್ತು ಮಾಜಿ ಶಾಸಕ ವೆಂಕಟಮುನಿಯಪ್ಪ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಎಸ್​ಸಿ ಸಮುದಾಯದ ಸಭೆಗೆ ಕರೆದಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಸಂಸದ ಮುನಿಸ್ವಾಮಿ ಬೆಂಬಲಿಗ ಆಗಿರುವ ಎಸ್​​ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ ಎಂದು ಬೇಸರವಾಗಿದೆ ಎಂದು ಸಂಸದರ ವಿರುದ್ಧ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಕಿಡಿಕಾರಿದ್ದಾರೆ. ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಮನವೊಲಿಸುವ ಯತ್ನ ನಡೆದಿತ್ತಾದರೂ,  ಅಶೋಕ್ ನಿರ್ಗಮನ ನಂತರ ಬೆಂಬಲಿಗರ ನಡುವೆ ವಾಗ್ವಾದ ಶುರುವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More