Siddaramaiah Press Meet Live: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಒಂದಡೆ ಬರಗಾಲ ಮತ್ತೊಂದಡೆ ಲೋಕಸಭೆ ಚುನಾವಣೆ. ಎರಡೂ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಸಚಿವ ಕೃಷ್ಣಭೈರೇಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದೆ. ಕೇಂದ್ರ ಸರ್ಕಾರ ಇನ್ನೂ ಕೂಡ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಹಾಗೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಭರ್ಜರಿಯಾಗೆ ತಯಾರಿ ನಡೆಸಿದೆ. ಈಗಾಗಲೆ 24 ಲೋಕಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ಎರಡು ಬಾಕಿ ಉಳಿಸಿಕೊಂಡಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.23) ತುರ್ತು ಸುದ್ದಿಗೋಷ್ಠಿ ನಡೆಸಿ, ಬರ ಪರಿಹಾರ ಘೋಷಿಸದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದರು.
Published on: Mar 23, 2024 03:33 PM
Latest Videos